ಉಡುಪಿ: ನಗರದ ಬಾರ್ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ಮನೆಯೊಳಗೆ ಮತ್ತಿಬ್ಬರು ಸಿಲುಕಿಕೊಂಡಿದ್ದು ಅವರ ರಕ್ಷಣೆ ಮಾಡಲಾಗಿದೆ. ಈ ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ.
#udupi #mangalore #spandanatv #kannadanews #news #spandana
Ещё видео!