purandara vittala
ಏಕೆ ಈ ದೇಹವನು ದಂಡಿಸುವೆ ವೃಥಾ - ಬಿಡ - |
ದೇಕ ಚಿತ್ತದಿ ಲಕ್ಷ್ಮೀಕಾಂತ ಹರಿ ಎನ್ನದೆ ಪ.
ಸ್ನಾನವನು ಮಾಡಿ ಧ್ಯಾನಿಸುವೆನೆನುತಲತಿ - |
ಮೌನವನು ಪಿಡಿದು ಬಕಪಕ್ಷಿಯಂತೆ |
ಹೀನ ಬುಧ್ಧಿಗಳ ಯೋಚಿಸಿ ಕುಳಿತು ಫಲವೇನು ||
ದಾನವಾಂತಕನ ನಾಮಕೆ ಮೌನವುಂಟೆ ? 1
ಜಪವ ಮಾಡುವೆನೆನುತ ಕಪಟಬುದ್ಧಿಯ ಬಿಡದೆ |
ಗುಪಿತದಿಂದಲಿ ನೀನು ಕುಳಿತು ಫಲವೇನು ||
ಅಪರಿಮಿತಮಹಿಮ ಶ್ರೀ ನಾರಾಯಣನೆಂದರೆ ||
ಸಫಲವಲ್ಲದೆ ಬೇರೆ ಗತಿಯುಂಟೆ ಮರುಳೆ 2
ಅಂದಜಾಮಿಳಗೆ ಸ್ಮರಣೆಯ ಮಾತ್ರದಲಿ ಮುಕುತಿ |
ಹಿಂದೆ ಶ್ರೀಹರಿಯು ತಾ ಕೊಡಲಿಲ್ಲವೇ ? |
ಸಂದೇಹವೇಕೆ ನೀನೊಂದು ಕ್ಷಣವಗಲದೆ |
ತಂದೆ ಶ್ರೀ ಪುರಂದರವಿಠಲ ನೆನೆಮನವೆ 3
Ещё видео!