ಇಳೆಯಿಂದ ಮೊಳಕೆ ಒಗೆ ಒಂದು ತಮಟೆಗಲಿಲ್ಲ |
ಫಲ ಮಾಗುವಂದು ತ್ತುತ್ತೂರಿ ದನಿಯಿಲ್ಲ ||
ಬೆಳಕೀವ ಸೂರ್ಯಚಂದ್ರರದೊಂದು ಸದ್ಹಿಲ್ಲ |
ಹೊಲಿ ನಿನ್ನ ತುಟಿಗಳನು ಮಂಕುತಿಮ್ಮ || 661 ||
iLeyinda moLakeyu ogevandu tamaTegaLilla ।
phala maaguvandu tuttoori daniyilla ॥
beLakeeva soorya chandraradondu saddilla ।
holi ninna tuTigaLanu – Mankutimma ॥661 ||
Nor is going struck when sprouts emerges from soil |
Nor is bugle played when fruits ripens ||
Nor is the whisper of the sun and moon which light the world |
Stitch your lips together - Mankutimma || 661 ||
New video of Mankutimmana Kagga Verse written by D.V.Gundappa.
---------------------------------------------------------------------------------------------------------------
Original Script written by : D.V.Gundappa (DVG)
Verses of Mankutimmana Kagga
Concept & Choreography : Namita Desai
Music & Vocals : Ganesh Desai
Recording & Mastering : P.Nagaraj Mysuru
Audio Recording: Aravind studios Bengaluru
DOP: Ganesh Hegde ( National Award winner)
Editing: Anji. K. Veera
----------------------------------------------------------------------------------------------------------------
Shooting Location : Ananya Sabhangana Bengaluru
Animation: Vedatma Animation Studios,, Bengaluru
Poster design: Shrikanth Hegde
----------------------------------------------------------------------------------------------------------------
Special Thanks to
Dr. Ananya Raghavendra Sir,
Shri Gururaj Kharajagi
Shri. Chakravarthy Ramagopalarya
Shri Ashok BA
Shri Sugganally Shadakshari
Shri Prashanth Kota
Humble Pranams to
SMT. Guru B. Bhanumathi
----------------------------------------------------------------------------------------------------------------
About DVG.
Devanahalli Venkataramanaiah Gundappa, popularly known as DVG, was an Indian writer, poet and philosopher in Kannada-language. He is one of the stalwarts of modern Kannada literature.
ಬಾಲ್ಯ ಜೀವನ
ಡಿ.ವಿ.ಜಿ ಅವರು ೧೮೮೭, ಮಾರ್ಚ್ ೧೭ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನಿಸಿದರು. ಅವರ ಪೂರ್ವಿಕರು ತಮಿಳುನಾಡಿನ ತಿರುಚಿನಾಪಳ್ಳಿಯ ಕಡೆಯವರು. ಅವರ ಮುತ್ತಜ್ಜ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ವಲಸೆ ಬಂದವರು. ಶೇಕದಾರ ಕುಟುಂಬದ ಗುಂಡಪ್ಪನವರು ೧೮೯೮ ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪಾಸಾದರು. ಆ ಸಂದರ್ಭದಲ್ಲೇ ಸಿಕ್ಕ ಇಂಗ್ಲಿಷ್ ಶಿಕ್ಷಣವನ್ನು ಪಡೆದರು. ಖಾಸಗಿಯಾಗಿ ಸಂಸ್ಕೃತವನ್ನು ಅಭ್ಯಾಸ ಮಾಡಿದರು. ಮುಂದೆ ಸಂಬಂಧಿಕರೊಬ್ಬರ ಸಹಾಯದಿಂದ ಮೈಸೂರಿನ ಮಹಾರಾಜ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದರು. ಆದರೆ ೧೯೦೫ ರಲ್ಲಿ ಮೆಟ್ರಿಕ್ಯುಲೇಷನ್ ನಲ್ಲಿ ತೇರ್ಗಡೆಯಾಗಲಿಲ್ಲ. ಅಲ್ಲಿಗೆ ಶಾಲಾ ಶಿಕ್ಷಣವನ್ನು ನಿಲ್ಲಿಸಿದರು.
ವೃತ್ತಿ ಜೀವನ
ಪ್ರೌಢಶಾಲೆಯಲ್ಲಿ ಓದುವಾಗಲೇ ಗುಂಡಪ್ಪನವರಿಗೆ ಮದುವೆಯಾಯಿತು. ಹೆಂಡತಿ ಭಾಗೀರಥಮ್ಮ. ಮುಂದೆ ಮುಳಬಾಗಿಲಿನ ಒಂದು ಶಾಲೆಯಲ್ಲಿ ಬದಲಿ ಅಧ್ಯಾಪಕರಾಗಿ ಕೆಲ ಕಾಲ ಕೆಲಸ ಮಾಡಿದರು. ಅದೇ ಅವರ ವೃತ್ತಿ ಜೀವನದ ನಾಂದಿ. ಆದರೂ ಅಲ್ಲಿರಲಾಗಲಿಲ್ಲ. ವೃತ್ತಿ ಬಿಟ್ಟು ಮುಂದೆ ಕೋಲಾರದ ಚಿನ್ನದ ಗಣಿಯಲ್ಲಿ, ಸೋಡಾ ಫ್ಯಾಕ್ಟರಿಯಲ್ಲಿ, ಕೆಲಸ ಮಾಡಿದರು. ನಂತರ ಬೆಂಗಳೂರಿಗೆ ಬಂದು ಕೆಲಸಕ್ಕಾಗಿ ಎಲ್ಲೆಂದರಲ್ಲಿ ಅಲೆದರು.
ಪತ್ರಿಕೋದ್ಯಮ ಜೀವನ ನಿರ್ವಹಣೆಗಾಗಿ ಏನಾದರೂ ಮಾಡಬೇಕಿದ್ದ ಗುಂಡಪ್ಪನವರು "ಸೂರ್ಯೋದಯ ಪ್ರಕಾಶಿಕ" ಪತ್ರಿಕೆಯಲ್ಲಿ ಬಾತ್ಮೀದಾರರಾಗಿ ಸೇರಿಕೊಂಡರು. ಹೆಚ್ಚು ಕಾಲ ಈ ಪತ್ರಿಕೆ ನಡೆಯಲಿಲ್ಲ. ಪುನಃ ಮತ್ತೊಂದಕ್ಕೆ ಗುಂಡಪ್ಪನವರ ಹೆಜ್ಜೆ, ಖರ್ಚಿಗಾಗಿ ಏನಾದರೂ ಬರೆಯಬೇಕಿತ್ತು. ಯಾವುದಾದರೂ ಪತ್ರಿಕೆ ಬೇಕಿತ್ತು. ಹಲವಾರು ಇಂಗ್ಲಿಷ್ ಪತ್ರಿಕೆಗಳಿಗೆ ಲೇಖನ ಬರೆದರು. ಕನ್ನಡ ಪತ್ರಿಕೆಗಳಲ್ಲಿ ಅನುಭವ ಪಡೆದರು. "ವೀರಕೇಸರಿ" ಯಲ್ಲಿ ಕಾರ್ಯ ನಿರ್ವಹಿಸಲು ಮದ್ರಾಸ್ ಗೆ ಹೋದಾಗ ಅಲ್ಲಿ "ಹಿಂದೂ" ಪತ್ರಿಕೆಗೆ ಬರೆದರು. ನಂತರ "ಮೈಸೂರು ಟೈಮ್ಸ್" ಇಂಗ್ಲಿಷ್ ಪತ್ರಿಕೆಯ ಸಹಾಯಕ ಸಂಪಾದಕರಾದರು.
ಸಾಹಿತ್ಯ ಕೃಷಿ
ದಿವಾನ್ ರಂಗಾಚಾರ್ಯ ಅವರ ಬಗ್ಗೆ ಇಂಗ್ಲಿಷಿನಲ್ಲಿ ಬರೆದ ಲೇಖನ ಡಿ.ವಿ.ಜಿ ಅವರ ಬದುಕಲ್ಲಿ ಹೊಸ ತಿರುವು ಪಡೆಯಿತು. ಮುಂದೆ ಪುಸ್ತಕ ರೂಪಕ್ಕೆ ತರಲು ಹಲವು ಮಾರ್ಪಾಡು ಮಾಡಿದರು. ಇದು ಪ್ರಕಟವಾಗುತ್ತಿದ್ದಂತೆ ಕೃತಿ ಪ್ರಕಟಣೆ ಮೂಲಕವೂ ಹಣ ಬರುವಂತಾಯಿತು. ಲೇಖನ, ಪರಿಚಯದ ಜೊತೆ ಕಾವ್ಯ ಕೃಷಿ ಪ್ರಧಾನವಾಯಿತು. ಅನುವಾದ ಸಾಹಿತ್ಯದ ಮೂಲಕ ಡಿ ವಿ ಜಿ ಉತ್ತಮ ಹೆಸರು ಪಡೆದರು. ರಾಜಕೀಯ ವಿಶ್ಲೇಷಣೆ, ತತ್ತ್ವಶಾಸ್ತ್ರ, ಧಾರ್ಮಿಕ ವಿಚಾರಗಳು, ಪ್ರಬಂಧ ಬರಹ, ಬೇರೆ ಬೇರೆ ಮಗ್ಗಲುಗಳಾದವು.
ಕನ್ನಡ ಕಾವ್ಯಕ್ಷೇತ್ರದಲ್ಲಿ "ಮಂಕುತಿಮ್ಮನ ಕಗ್ಗ"[೫] ಹಾಗೂ "ಮರುಳ ಮುನಿಯನ ಕಗ್ಗ"[೬] ದ ಮೂಲಕ ಡಿ ವಿ ಜಿ ಮನೆಮಾತಾದವರು:
ಈ ಕೃತಿ ಕನ್ನಡದ ಭಗವದ್ಗೀತೆಯೆಂದೇ ಹಲವರು ಭಾವಿಸುವಂತಹ ಉತ್ಕೃಷ್ಟ ಸಂಕಲನ. "ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು" ಎಂದ ಡಿ ವಿ ಜಿ, ಕವಿ ಪರಂಪರೆ ಹಾಗೂ ವಿಜ್ಞಾನ ನಂಬಿಕೆಗೆ ಕೊಂಡಿ ಬೆಸೆದವರು. ಹಳೆಯದನ್ನು ಬಿಡಲಾರದ ಹೊಸತು ವಿಜ್ಞಾನ ಸೃಷ್ಟೀಕರಿಸಲಾಗದ ಭಾರತೀಯ ಮನಸ್ಸುಗಳನ್ನು ಒಂದಾಗಿಸುವ ವಿಚಾರಲಹರಿಯನ್ನು ಕಾವ್ಯ ಮುಖೇನ ನೀಡಿದ ಡಿ ವಿ ಜಿ ಪತ್ರಕರ್ತರಾಗಿಯೂ ಹೆಸರಾದವರು. ವ್ಯಕ್ತಿ ವಿಚಾರದ ಬರಹಗಳಿಂದ ನಾಲ್ಕು ಕಾಲ ನೆನಪಲ್ಲಿರುವವರು. ಹೀಗಾಗಿ ಅವರ "ಮಹನೀಯರು", "ಜ್ಞಾಪಕ ಚಿತ್ರಶಾಲೆ" ಮಹತ್ವದ ವಿಚಾರಗಳನ್ನು ಹೊರಚೆಲ್ಲಿದ ಕೃತಿಗಳು.
ಡಿ.ವಿ.ಜಿ ಅವರನ್ನು ಆಧುನಿಕ ಭಾರತೀಯ ಸಾಹಿತ್ಯದ ಒಂದು ಅಶ್ವತ್ಥ ವೃಕ್ಷ ಎಂದು ಕರೆಯುತ್ತಾರೆ. ಡಿ.ವಿ.ಜಿ ಅವರ ವಿದ್ವತ್ತು ಹಾಗೂ ಚಿಂತನೆ ಕಂಡವರು ಒಬ್ಬ ಋಷಿ ಎಂದಿದ್ದಾರೆ. ಅವರ ಸಾಹಿತ್ಯ ಬಾಳಿಗೊಂದು ನಂಬಿಕೆಯನ್ನೂ, ಭರವಸೆಯನ್ನೂ ಕೊಟ್ಟಿದೆ. ಹಾ.ಮಾ.ನಾಯಕ ರು "ಡಿ ವಿ ಜಿ ಅವರದು ಸತ್ಯ ಶಿವ ಸೌಂದರ್ಯಗಳು ಸಮಹಿತವಾದ ಸಾಹಿತ್ಯ" ಎಂದಿದ್ದಾರೆ.
ಕರ್ನಾಟಕ ಸರ್ಕಾರ ಡಿ.ವಿ.ಜಿ ಅವರ ಶತಮಾನೋತ್ಸವ ಸಂದರ್ಭದಲ್ಲಿ ಅವರ ಸಮಗ್ರ ಸಾಹಿತ್ಯ ಸಂಪುಟ ಹೊರತರುವ ಯೋಜನೆ ಹಮ್ಮಿಕೊಂಡಿದೆ. ಈ ಪ್ರಕಾರ "ಡಿ ವಿ ಜಿ ಕೃತಿ ಶ್ರೇಣಿ"ಯಲ್ಲಿ ವಿಚಾರ, ವಿಮರ್ಶೆ, ನಾಟಕ, ಶಿಶು ಸಾಹಿತ್ಯ, ಜೀವನ ಚರಿತ್ರೆಗಳು, ಕಾವ್ಯ ೧-೨, ನೆನಪಿನ ಚಿತ್ರಗಳು, ಸಂಕೀರ್ಣ ಹೊರತಂದಿದೆ.
ಕನ್ನಡದ ವಿಜ್ಞಾನ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ಕೊಟ್ಟ ಬಿ ಜಿ ಎಲ್ ಸ್ವಾಮಿ, ಡಿ ವಿ ಜಿ ಅವರ ಪುತ್ರರು. ತಮ್ಮ ಜೀವನ ಅಂತ್ಯದ ವರೆಗೂ ಮದರಾಸಿನಲ್ಲೇ ಕಾಲ ಕಳೆದ ಸ್ವಾಮಿ ಕನ್ನಡ ಸಾಹಿತ್ಯ ಕಂಡ ಅಪರೂಪದ ಬರಹಗಾರರು.
Ещё видео!