ಕರ್ನಾಟಕ, ತಮಿಳುನಾಡು ಸೇರಿದಂತೆ ದೇಶದ ದಕ್ಷಿಣ ಭಾಗಗಳಲ್ಲಿ ಮುಂದಿನ ಎರಡು ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಂಡಮಾನ್ ನಿಕೋಬಾರ್ ದ್ವೀಪ, ಪಾಂಡಿಚೆರಿ ಪ್ರದೇಶಗಳಲ್ಲೂ ಸಹ ಭಾರೀ ವರ್ಷಧಾರೆಯಾಗುವ ನಿರೀಕ್ಷೆ ಇದೆ. ಆದರೆ, ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಇದೇ ತಿಂಗಳ 23 ಮತ್ತು 24ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಈ ಮಧ್ಯೆ, ವಾಯುವ್ಯ, ಪಶ್ಚಿಮ, ಮಧ್ಯ ಹಾಗೂ ಈಶಾನ್ಯ ಭಾರತದಲ್ಲಿ ಗಮನಾರ್ಹ ಮಳೆ ಆಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಸತತ ಮಳೆಯಾಗುತ್ತಿದೆ. ಮುಂದಿನ ಇನ್ನೆರೆಡು ಮೂರು ದಿನಗಳು ಕೂಡ ಮುಂದುವರೆಯುವ ಸಾಧ್ಯತೆ ಇದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯದಲ್ಲಿ ಮಳೆಯಿಂದಾಗಿ ಬೆಳೆಹಾನಿಗೊಳಗಾದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಬೆಳೆ ಪರಿಹಾರ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
#LiveDDChandanaNews #DDChandanaNews #DDChandana #DDKannada
Ещё видео!